ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್: 20 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಪರ್ವತ ರಸ್ತೆಯಿಂದ ಬಿದ್ದು ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.

ಪಿಒಕೆಯ (POK) ಡೈಮರ್‌ನಲ್ಲಿರುವ ಕಾರಕೋರಂ ಹೆದ್ದಾರಿಯ ಯಶೋಖಲ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಪಾಕಿಸ್ತಾನದ ರಾವಲ್ಪಿಂಡಿಯಿಂದ ಪಿಒಕೆಯ ಗಿಲ್ಗಿಟ್‌ಗೆ ತೆರಳುತ್ತಿತ್ತು. ಬಸ್‌ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ರಕ್ಷಣಾ ತಂಡಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಗಾಯಗೊಂಡವರನ್ನು ಚಿಲಾಸ್‌ನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!