ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಭೀಮತಾಲ್‌ನಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ 1500 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದು, 24 ಮಂದಿ ಗಾಯಗೊಂಡಿದ್ದಾರೆ.
ನೈನಿತಾಲ್ ಜಿಲ್ಲೆಯ ಭೀಮತಾಲ್‌ನ ಅಮ್ದಾಲಿ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿವೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಲ್ದ್ವಾನಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.