ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದಾರೆ. ಇದರೊಂದಿಗೆ ಗಾಯಗೊಂಡವರ ಸಂಖ್ಯೆ 19ಕ್ಕೆ ಏರಿದೆ.
ಸದ್ಯ ಎನ್‌ಡಿಆರ್‌ಎಫ್ (NDRF), ಎಸ್‌ಡಿಆರ್‌ಎಫ್ (SDRF) ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.