ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಬಸ್ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಬೆಂಗಳೂರು ಡಿಪೋಗೆ ಸೇರಿದೆ. ಸ್ಥಳಕ್ಕೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಮಾಹಿತಿ ಪಡೆದರು.