BREAKING NEWS | ಸೇತುವೆಯಿಂದ 50 ಅಡಿ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರಿದ್ದ ಬಸ್ ಸೇತುವೆಯಿಂದ ಬಿದ್ದಿದ್ದು, 15ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದೋರ್‌ಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಡೊಂಗರ್‌ಗಾಂವ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ, ಸಾವಿನ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ, ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಧ್ಯಪ್ರದೇಶ ಸರ್ಕಾರ ಅವಘಡಕ್ಕೆ ಸ್ಪಂದಿಸಿದ್ದು, ಅಪಘಾತದಲ್ಲಿ ಮೃತಪಟ್ಟವರಿಗೆ ನಾಲ್ಕು ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಹಾಗೂ ಗಾಯಗೊಂಡವರಿಗೆ 25 ಸಾವಿರ ರೂಪಾಯಿ ಆರ್ಥಿಕ ನೆರವು ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!