ಕಂದಕಕ್ಕೆ ಉರುಳಿ ಬಿದ್ದ ಬಸ್, 12 ಮಂದಿ ಮೃತ್ಯು, 14 ಮಂದಿಗೆ ಗಂಭೀರ ಗಾಯ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯೊಂದರ 12 ಮಂದಿ ಕಾರ್ಮಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ದಾರುಣ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದಿದೆ.

ದುರ್ಗದ ಗಣಿಯಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮಂಗಳವಾರ ರಾತ್ರಿ ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಬಸ್ಸಿನಲ್ಲಿ ಸಿಲುಕಿರುವವರನ್ನು ಹೊರತರುವ ಪ್ರಯತ್ನ ಮುಂದುವರಿದಿದೆ. ದುರ್ಗ್ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾತನಾಡಿ, ಬಸ್‌ನಲ್ಲಿ ಕಾರ್ಮಿಕರೇ ತುಂಬಿದ್ದರು. ಮಂಗಳವಾರ ರಾತ್ರಿ ಹೊಂಡಕ್ಕೆ ಬಸ್ ಬಿದ್ದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾತ್ರಿ 8:30 ರ ಸುಮಾರಿಗೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕುಮ್ಹಾರಿ ಬಳಿ ಹಳ್ಳಕ್ಕೆ ಬಿದ್ದಿತು, 12 ಜನರು ಸಾವನ್ನಪ್ಪಿದರು ಮತ್ತು 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ತುಂಬಾ ದುಃಖಕರವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾವು ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ರಾಜ್ಯ ಸರ್ಕಾರ ಇದನ್ನು ಮೇಲ್ವಿಚಾರಣೆ ಮಾಡುತ್ತದೆ. ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!