ಕಂದಕಕ್ಕೆ ಬಿದ್ದ ಬಸ್‌ : ಶಾಲಾ ಮಕ್ಕಳೂ ಸೇರಿದಂತೆ 16 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಹಿಮಾಚಲದ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದ ಕುಲುವಿನ ಸೈನ್ಜ್ ಕಣಿವೆಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಒಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪಘಾತದ ಸ್ಥಳವು ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಮೂವರು ಗಾಯಗೊಂಡವರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!