ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಮಸ್ಸೂರಿ-ಡೆಹ್ರಾಡೂನ್ ರಸ್ತೆ ಮಾರ್ಗದಲ್ಲಿ ಬಸ್ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ.
ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ ಆಗಮಿಸಿ ರಕ್ಷಣಾ ಕಾರ್ಯ ನಡೆಯುತ್ತಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನೆರವಿನಿಂದ ಎಲ್ಲಾ ಗಾಯಾಳುಗಳನ್ನು ರಕ್ಷಣೆ ಮಾಡಲಾಗಿದೆ ಹಾಗೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಸ್ಸೂರಿ ಪೊಲೀಸರು ಮಾಹಿತಿ ನೀಡಿದ್ದಾರೆ.