ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್: ಮಹಿಳೆ ಸಾವು, ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ. ಪ್ರವಾಸಿಗರನ್ನು ಹೊತ್ತ ಖಾಸಗಿ ಬಸ್‌ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪ್ರಪಾತಕ್ಕೆ ಉರುಳಿದೆ. ಬಸ್‌ನಲ್ಲಿದ್ದ ಬೆಂಗಳೂರಿನ ಯಲಹಂಕ ನಿವಾಸಿಯಾದ ಸುರೇಖಾ (45) ಎಂಬುವರು ಮೃತಪಟ್ಟಿದ್ದಾರೆ.

ಬಸ್‌ನಲ್ಲಿ 48 ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!