ಹೊಸದಿಗಂತ ವರದಿ ಅಂಕೋಲಾ:
ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿರುವ ಮರಕ್ಕೆ ಗುದ್ದಿದ ಪರಿಣಾಮ ಸುಮಾರು 12 ಜನರು ಗಾಯಗೊಂಡ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕಾರವಾರದಿಂದ ಶಿರಸಿ, ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಕಾರವಾರ ಘಟಕದ ಬಸ್ಸು
ಅಂಕೋಲಾ ಬಸ್ ನಿಲ್ದಾಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿರುವ ಸಾಗವಾನಿ ಮರಕ್ಕೆ ಡಿಕ್ಕಿ ಹೊಡೆದಿದ್ದು 12 ಪ್ರಯಾಣಿಕರ ಮುಖ, ಕೈ ಕಾಲುಗಳಿಗೆ,ಸಾದಾ ಸ್ವರೂಪದ ತಿಳಿದು ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.
ಬಸ್ ನಿಲ್ದಾಣದಿಂದ ಬಸ್ಸುಗಳು ಹೊರ ಹೋಗುವ ದಾರಿ ಇಳಿಜಾರು ಸ್ಥಿತಿಯಲ್ಲಿ ಇದ್ದು ವಾಹನ ಮರಕ್ಕೆ ಡಿಕ್ಕಿ ಹೊಡೆಯದಿದ್ದರೆ ನೇರವಾಗಿ ರಸ್ತೆ, ಆಟೋ ನಿಲ್ದಾಣದತ್ತ ನುಗ್ಗಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎನ್ನಲಾಗುತ್ತಿದೆ. ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅಂಕೋಲಾ ಪೊಲೀಸರು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.