ಕೊಲ್ಲೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ: ಐವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮೆಣಸು ಸಾಗಾಟದ ಪಿಕ್ ಆಫ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ನಡೆದಿದೆ.

ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಕೊಲ್ಲೂರಿನಿಂದ ಬರುತ್ತಿದ್ದ ಪಿಕ್ ಆಫ್ ಕುಂದಾಪುರ ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ.

ಅಪಘಾತದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯ ಗೊಂಡವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಸಾಗಿಸಲಾಗಿದೆ .

ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!