ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ ಬೇಗೂರು ಜಂಕ್ಷನ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 15 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಇದರಿಂದ ಬಸ್‌ನ ಕೆಳಗಡೆ ಕಾರ್ಮಿಕರು ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಕ್ರೇನ್ ಮೂಲಕ ಬಸ್ ಮೇಲೆತ್ತಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಾರ್ಮಿಕರನ್ನು ಊಟಕ್ಕೆಂದು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.