ಬಸ್ ಪಲ್ಟಿ: ಶಾಲಾ ಮಕ್ಕಳು ಸೇರಿದಂತೆ 40 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಎಸ್‍ಆರ್​ಟಿಸಿ ಬಸ್ ರಸ್ತೆ ಬದಿ ಪಲ್ಟಿ ಹೊಡೆದ ಪರಿಣಾಮ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಳ್ಳಾರಿಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ರಸ್ತೆಯಲ್ಲಿ ಇಂದು ಸಂಭವಿಸಿದೆ.

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಗಂಭೀರವಾಗಿ ಗಾಯಗೊಂಡಿರುವ ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್​ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬಸ್‌ ಕಂಡಕ್ಟರ್​ ಕೈ ಮುರಿದಿದೆ.

ಗಿರೆನಹಳ್ಳಿ ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್​ನಲ್ಲಿ ಶಾಲಾ, ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದು ಬಂದಿಲ್ಲ.

ವಿಷಯ ತಿಳಿದ ಕೂಡಲೇ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!