ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ತಾಲೂಕಿನ ಹೊಸಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಇದು ಮೈಸೂರು ಸಿಟಿ ಬಸ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. 20 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.