ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಆಫ್ರಿಕಾದ ಕನಿಬಾದಲ್ಲಿ ಸೇತುವೆಯಿಂದ ಬಸ್ ಉರುಳಿ ಬಿದ್ದು ಸುಮಾರು 31 ಮಂದಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಬುರ್ಕಿನಾ ಫಾಸೊ ಪ್ರವಾಸದ ವೇಳೆ ಈ ಅವಘಡ ಸಂಭವಿಸಿದೆ. ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದು ನದಿಯ ನೀರಿಗೆ ಬಿದ್ದಿದೆ ಎನ್ನಲಾಗಿದೆ.
ಸಾರಿಗೆ ಸಚಿವಾಲಯದ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಬಸ್ಸಿನಲ್ಲಿ ಮಾಲಿಯನ್ನರು ಮತ್ತು ಇತರ ನಾಗರಿಕರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.