ಛತ್ತೀಸ್ ಗಢದಲ್ಲಿ ಬಸ್ ಪಲ್ಟಿ: ಸಿಆರ್ ಪಿಎಫ್ ಯೋಧರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಛತ್ತೀಸ್ ಗಢದ ಬಸ್ತರ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮೊದಲ ಹಂತದ ಚುನಾವಣಾ ಕರ್ತವ್ಯ ಪೂರ್ಣಗೊಳಿಸಿದ ನಂತರ ಮಧ್ಯಪ್ರದೇಶದ ಎರಡನೇ ಬೆಟಾಲಿಯನ್ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಜಿಲ್ಲೆಯ ದಿಲ್ಮಿಲಿ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಐಜಿ ಸುಂದರರಾಜ್ ಹೇಳಿದ್ದಾರೆ.

ಅಪಘಾತದಲ್ಲಿ ಒಂಬತ್ತು ಯೋಧರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಏಪ್ರಿಲ್ 19 ರಂದು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದಿತ್ತು. ಮೊದಲ ಹಂತದ ಚುನಾವಣೆಯ ಚುನಾವಣಾ ಕರ್ತವ್ಯವನ್ನು ಪೂರ್ಣಗೊಳಿಸಿದ ನಂತರ ಯೋಧರು ಎರಡನೇ ಹಂತದ ಕರ್ತವ್ಯಕ್ಕೆ ತೆರಳುತ್ತಿದ್ದರು. ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,ದಾರಿಯಲ್ಲಿದ್ದ ಚಿಕ್ಕ ವಾಹನವನ್ನು ರಕ್ಷಿಸಲು ಬಸ್ ಚಾಲಕ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!