Wednesday, November 29, 2023

Latest Posts

ಶಬರಿಮಲೆ ಯಾತ್ರಿಕರಿದ್ದ ಬಸ್‌ ಪಲ್ಟಿ: 13ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಪಲ್ಟಿಯಾಗಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

40 ಯಾತ್ರಾರ್ಥಿಗಳು ಸೇರಿ ಒಟ್ಟು 43 ಮಂದಿ ಇದ್ದ ಬಸ್​ ಎರುಮೇಲಿ ಸಮೀಪದ ಕನಮಾಲ ಬಳಿ ಅಪಘಾತಕ್ಕೀಡಾಗಿದೆ. ಬಸ್​ನಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಶಬರಿಮಲೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕೋಲಾರದ ಯಾತ್ರಾರ್ಥಿಗಳು ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ. ಇದರಿಂದಾಗಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ನಾಲ್ವರನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ. ಮತ್ತೆ ನಾಲ್ವರನ್ನು ಇಲ್ಲಿನ ಜನರಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!