ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮನಾಲಿ ಚಂಡೀಗಢ ರಾಷ್ಟ್ರೀಯ ಹೆದ್ದಾರಿಯ ಬಿಲಾಸ್‌ಪುರ ಜಿಲ್ಲಾ ಕಛೇರಿ ಸಮೀಪದ ಜಬ್ಲಿಯಲ್ಲಿ ಇಂದು ಸಂಭವಿಸಿದ ಬಸ್ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 41 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಹರ್ಯಾಣದಿಂದ ಮನಾಲಿಗೆ ತೆರಳುತ್ತಿದ್ದ HR 38 AB 0007 ಸಂಖ್ಯೆಯ ಪ್ರವಾಸಿ ಬಸ್ ಮನಾಲಿ-ಚಂಡೀಗಢ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಎಲ್ಲಾ ಗಾಯಾಳುಗಳನ್ನು ಬಿಲಾಸ್‌ಪುರ ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.