ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ಸೌಲಭ್ಯ: ಕೆ.ವಿ. ಪ್ರಭಾಕರ್

ಹೊಸದಿಗಂತ ವರದಿ ಬೆಳಗಾವಿ:

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ಮುಂದಿನ ವರ್ಷ ಜಾರಿಗೆ ಬರಬಹುದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ. ವಿ.‌ಪ್ರಭಾಕರ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದ ವತಿಯಿಂದ
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಬೇಡಿಕೆ ಬಹಳ ದಿನಗಳಿಂದ ಇದ್ದು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸಿದ್ದಾರೆ. ಇದಕ್ಕೆ ವಾರ್ಷಿಕ ಹತ್ತು ಕೋಟಿ ವೆಚ್ಚ ತಗುಲಲಿದೆ ಎಂದರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ. ವಿ.‌ಪ್ರಭಾಕರ, ಗಿರೀಶ ಕೋಟೆ ಅವರಿಗೆ ಅಭಿಮಾನದ ಅಭಿವಂದನೆ ನೀಡಿ ಇಂದು ಸನ್ಮಾನಿಸಲಾಯಿತು.

ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಮಹಾನಗರ ಪಾಲಿಕೆ ಕಮಿಷ್ನರ್ ಅಶೋಕ ದುಡಗುಂಟಿ, ಸರ್ವೋತ್ತಮ ಜಾರಕಿಹೊಳಿ ಇತರರು ಉಪಸ್ಥಿತರಿದ್ದರು.‌

ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನೂ ಸನ್ಮಾನಿಸಲಾಯಿತು. ಹಿರಿಯ ಪತ್ರಿಕಾ ವಿತರಕರಿಗೆ ಸಂಘದ ವತಿಯಿಂದ ಹೊಸ ಸೈಕಲ್ ವಿತರಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!