ಪಾದಚಾರಿಗಳ ಮೇಲೆ ಹರಿದ ಬಸ್: ಇಬ್ಬರು ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಸಮೀಪ ಘಟನೆ ನಡೆದಿದೆ.

ಆನಗೋಳು ಗ್ರಾಮದ ಸುರೇಶ್(60), ಕುಮಾರ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!