ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರು ಬಂದ್ ಇರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುವ ತಮಿಳುನಾಡು ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯದಲ್ಲಿ ತಮಿಳುನಾಡು ಬಸ್‌ಗಳಿಗೆ ಕಲ್ಲು ತೂರಾಟ ನಡೆಸುವ ಸಂಭವ ಹೆಚ್ಚಿರುವುದರಿಂದ ಕರ್ನಾಟಕಕ್ಕೆ ಬರುವ ತಮಿಳುನಾಡು ಬಸ್ ಸಂಚಾರ ಸ್ಥಗಿತಗೊಂಡಿದೆ.
ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಜುಜುವಾಡಿಯಲ್ಲಿ ತಮಿಳುನಾಡಿನ ಹಲವಾರು ಬಸ್‌ಗಳನ್ನು ನಿಲ್ಲಿಸಲಾಗುತ್ತಿದೆ.