ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..
ಹೊಸ ದಿಗಂತ ವರದಿ, ಮಡಿಕೇರಿ:
ಕೋವಿಡ್ 19 ಹೆಚ್ಚಳ ಹಿನ್ನೆಲೆ ಮಡಿಕೇರಿ ಸಂತೆಯನ್ನು ಈಗಾಗಲೇ ರದ್ದು ಮಾಡಿರುವುದರಿಂದ ಸದ್ಯ ತಾತ್ಕಾಲಿಕವಾಗಿ ಜಿಲ್ಲಾಧಿಕಾರಿ ಅವರ ಆದೇಶದಂತೆ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ 40 ಮಂದಿ ಮತ್ತು ಎಪಿಎಂಸಿ ಆವರಣದಲ್ಲಿ 20 ಮಂದಿ ತರಕಾರಿ ಮಾರಾಟಕ್ಕೆ ಅವಕಾಶ ಮಾಡಲಾಗಿದೆ ಎಂದು ಪೌರಾಯುಕ್ತ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅವರ ಆದೇಶದಂತೆ ತರಕಾರಿ ಮಾರಾಟ ಮಾಡಲು ಎರಡು ಕಡೆ ಸ್ಥಳ ನಿಗದಿ ಮಾಡಲಾಗಿದೆ. ಉಳಿದಂತೆ ತರಕಾರಿ ಅಂಗಡಿಯವರು ತಮ್ಮ ಅಂಗಡಿಯಲ್ಲಿಯೇ ತರಕಾರಿ ಮಾರಾಟ ಮಾಡಬಹುದಾಗಿದೆ. ಆದರೆ ಬೀದಿ ಬದಿ ತರಕಾರಿ ಮಾರಾಟ ಮಾಡುವಂತಿಲ್ಲ ಎಂದು ಪೌರಾಯುಕ್ತರು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ನಗರಸಭೆ ಪೌರಾಯುಕ್ತರಾದ ರಾಮದಾಸ್, ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಂತಿಮಾ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಕೋವಿಡ್ ಮಾರ್ಗಸೂಚಿ ಪಾಲಿಸುವಲ್ಲಿ ತರಕಾರಿ ಕೊಳ್ಳಲು ಗುರುತು ಮಾಡಲಾಯಿತು.