ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲುವಿನ ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೆ, ಬಸ್‌ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 20 ರಿಂದ 25 ಜನರಿದ್ದರು ಎಂದು ಅವರು ಹೇಳಿದರು.
ಇತರ ಪ್ರಯಾಣಿಕರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಮ್ಮ ತಂಡವು ಸ್ಥಳದಲ್ಲಿದೆ ಎಂದು ಕುಲು ಜಿಲ್ಲಾಧಿಕಾರಿ ಎಸ್ ರವೀಶ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಾಂಪುರಕ್ಕೆ ಕಳುಹಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.