ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರ್ ಪ್ರದೇಶದಲ್ಲಿ ಬಸ್‌ಗೆ ಪಿಕಪ್ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.
“ಘಜಿಯಾಬಾದ್‌ನಿಂದ ಸಂಭಾಲ್‌ಗೆ ತೆರಳುತ್ತಿದ್ದ ಪಿಕಪ್ ವ್ಯಾನ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಕಾರ್ಮಿಕರು ಬ್ರಿಟೈನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ರಕ್ಷಾಬಂಧನವನ್ನು ಆಚರಿಸಲು ಅಲಿಘರ್‌ನಲ್ಲಿರುವ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ.