ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಬೆಲೆ ಹಲವು ವರ್ಷಗಳಿಂದ ಏರಿಕೆಯಾಗಿಲ್ಲ. ಜಲಮಂಡಳಿಯಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದು, ಚರ್ಚಿಸಿ ನೀರಿನ ಶುಲ್ಕ ಹೆಚ್ಚಳಕ್ಕೆ ತೀರ್ಮಾನಿಸಲಾಗುವುದು ಎಂದರು.
ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.