March 26, 2026
Thursday, March 26, 2026
spot_img

ಬಸ್‌-ಟಿಪ್ಪರ್ ನಡುವೆ ಡಿಕ್ಕಿ: 12 ಮಂದಿ ಸಜೀವ ದಹನ, ಸುಟ್ಟು ಬೂದಿಯಾದ ಖಾಸಗಿ ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಬಸ್ ಒಂದು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಹಲವು ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪ ಈ ದುರ್ಘಟನೆ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಬಸ್ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಯಿಂದ ಪ್ರಯಾಣಿಕರಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಗದೆ 12 ಮಂದಿ ಸಜೀವ ದಹನವಾಗಿದ್ದಾರೆ.

ಇದನ್ನೂ ಓದಿ:

ಘಟನೆ ತಿಳಿದ ಕೂಡಲೇ ಆಂಧ್ರ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 20 ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೃತರಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಜೊತೆಗೆ ಘಟನೆಯ ಸಂಪೂರ್ಣ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ತೆಲಂಗಾಣದಿಂದ ನೆಲ್ಲೂರಿಗೆ ಸಾಗುತ್ತಿದ್ದ ಬಸ್ ಈ ಅಪಘಾತಕ್ಕೆ ಒಳಗಾಗಿದ್ದು, ಕಾರಣಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !