ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಬಸ್ನ ಟೈಯರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ವೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ.
ಟೈಯರ್ ಬ್ಲಾಸ್ಟ್ ಆಗ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.