ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾದ ಪರಿಣಾಮ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ವಾಧ್ನಿಂದ ದಾಬು ಎಂಬಲ್ಲಿಗೆ ತೆರಳುತ್ತಿದ್ದ ಬಸ್, ಖುಜ್ದಾರ್ ಜಿಲ್ಲೆಯ ಖೋರಿ ಎಂಬಲ್ಲಿ ಪಲ್ಟಿಯಾಗಿದ್ದು, ಬಸ್ ವೇಗವಾಗಿ ಚಲಿಸುತ್ತಿದ್ದಾಗ, ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಪಲ್ಟಿಯಾಯಿತು ಎಂದು ಮೂಲಗಳು ತಿಳಿಸಿವೆ.
15 ಜನರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಜಿಯೊ ನ್ಯೂಸ್ ಚಾನೆಲ್ ವರದಿ ಮಾಡಿದೆ.ಗಾಯಗೊಂಡವರನ್ನು ಖುಜ್ದಾರ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.