Saturday, August 13, 2022

Latest Posts

ಬಸ್, ಟ್ರಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಸ್ ಮತ್ತು ಸರಕು ಸಾಗಾಣಿಕಾ ಟ್ರಕ್ ನಡುವೆ ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 5 ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ಭೀಕರ ಅಪಘಾತ ಸಂಭವಿಸಿರುವುದು ರಾಜಸ್ಥಾನದ ಜೋಧ್ ಪುರ ಬಾಪ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 11ರಲ್ಲಿ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್ ಈ ಕುರಿತು ಟ್ವೀಟ್ ಮಾಡಿದ್ದು, ಜೋಧ್ ಪುರ ಬಾಪ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 11ರಲ್ಲಿ ನಡೆದ ಅಪಘಾತದಲ್ಲಿ 5 ಜನ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿ ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss