ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ-ಛತ್ತೀಸ್‌ಗಢ ಗಡಿಯಲ್ಲಿ ಪ್ರಯಾಗರಾಜ್‌ಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ ನಡೆದ ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಿದ್ದಲು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಶ್ಯಾಮ್ ಸಿದರ್ ತಿಳಿಸಿದ್ದಾರೆ. ಗಾಯಾಳುಗಳನ್ನು ಅಣ್ಣುಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
“ರಾಯಪುರದಿಂದ ಪ್ರಯಾಣಿಸುತ್ತಿದ್ದ ಬಸ್ ಅನುಪ್ಪುರ್-ಛತ್ತೀಸ್‌ಗಢ ಗಡಿಯಲ್ಲಿ ನಿಂತಿದ್ದ ಕಲ್ಲಿದ್ದಲು ತುಂಬಿದ ಬ್ಯಾಕ್‌ಡೌನ್ ಟ್ರೈಲರ್‌ಗೆ ಡಿಕ್ಕಿ ಹೊಡೆದಿದೆ. ಅನೇಕ ಭಕ್ತರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಅನುಪ್ಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ. ಹೈವೇ ಪೆಟ್ರೋಲಿಂಗ್ ತಂಡದಿಂದ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ.