ಉದ್ಯಮಿ ಬಿ.ಆರ್. ಶೆಟ್ಟಿ 131 ದಶಲಕ್ಷ ಡಾಲರ್ ಕೊಡಲು ಲಂಡನ್‌ ಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನಿವಾಸಿ ಭಾರತೀಯ,ಉದ್ಯಮಿ ಬಿ.ಆರ್. ಶೆಟ್ಟಿಗೆ 131 ದಶಲಕ್ಷ ಡಾಲರ್ (ಭಾರತೀಯ ಕರೆನ್ಸಿಯಲ್ಲಿ ರೂ 9,68,27,99,500) ಕಟ್ಟುವಂತೆ ಲಂಡನ್ ಕೋರ್ಟ್ ಸೂಚಿಸಿದೆ.
ಬಿ.ಆರ್. ಶೆಟ್ಟಿ ತಮ್ಮ ಕಂಪನಿಯ ಜೊತೆ 2020ರಲ್ಲಿ ಮಾಡಿಕೊಂಡಿದ್ದ ವಿದೇಶ ವಿನಿಮಯ ಬಿಸಿನೆಸ್​ ಅಗ್ರಿಮೆಂಟ್​ ಪ್ರಕಾರ ಬಾರ್ಕ್ಲೇಸ್ ಕಂಪನಿಗೆ ಹಣ ಪಾವತಿಸುವಲ್ಲಿ ವಿಫಲವಾಗಿದ್ದು, . ಹಾಗಾಗಿ ಬಿ.ಆರ್. ಶೆಟ್ಟಿ ಅವರಿಂದ ಹಣ ಕೊಡಿಸಬೇಕು ಎಂದು ಕಂಪನಿ ಲಂಡನ್ ಕೋರ್ಟ್ ಮೊರೆ ಹೋಗಿದ್ದಾರೆ. ಕಂಪೆನಿಯ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ಇದೀಗ 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದೆ.
ಇದಕ್ಕೂ ಮುನ್ನ ದುಬೈ ಕೋರ್ಟ್​ ಸಹ ಬಾರ್ಕ್ಲೇಸ್ ಕಂಪನಿ ಪರ ಆದೇಶ ನೀಡಿತ್ತು. ​ ದುಬೈ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಲಂಡನ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬ್ರಿಟನ್‌ ನ್ಯಾಯಾಲಯ ವಿಚಾರಣೆಯ ಸಂದರ್ಭದಲ್ಲಿ ಬಿ.ಆರ್.ಶೆಟ್ಟಿ ಪರ ವಕೀಲರು ತಮ್ಮ ಕಕ್ಷಿದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ತೀರ್ಪನ್ನು ಮುಂದೂಡಬೇಕು ಎಂದು ಕೋರಿದ್ದರು.   ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2022ರ ಜನವರಿ 10ಕ್ಕೆ ಮುಂದೂಡಿತ್ತು. ನಿನ್ನೆ ತೀರ್ಪನ್ನು ಮುಂದೂಡುವಂತೆ ಮತ್ತೊಮ್ಮೆ ನ್ಯಾಯಾಲಯವನ್ನು ಕೋರಿದರು. ಆದರೆ ಲಂಡನ್ ಕೋರ್ಟ್ ಆ ಮನವಿಯನ್ನು ತಿರಸ್ಕರಿಸಿದೆ . ಬಿ ಆರ್ ಶೆಟ್ಟಿ ಬ್ಯಾಂಕ್ ಬಾರ್ಕ್ಲೇಸ್‌ಗೆ 131 ಮಿಲಿಯನ್ ರೂ ಪಾವತಿಸಲು ಆದೇಶಿಸಿದೆ.
ಇದರ ಜೊತೆಗೆ ಭಾರತ ಸೇರಿದಂತೆ ಇತರ ದೇಶಗಳು, ಲಂಡನ್‌ ನಲ್ಲಿರುವ ಬಿ.ಆರ್.ಶೆಟ್ಟಿ ಅವರ ಆಸ್ತಿ ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕ್‌ ಪ್ರತಿನಿಧಿಗಳು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದಾರೆ.
ಬಿ.ಆರ್.​ ಶೆಟ್ಟಿ ಎದುರಿಸುತ್ತಿರುವ ಕಾನೂನು ಹೋರಾಟ ಇದೊಂದೇ ಅಲ್ಲ. ಅವರು ತಮ್ಮ NMC ಹೆಲ್ತ್‌ಗಾಗಿ ಅದರ ಲೆಕ್ಕಪರಿಶೋಧನೆಯ ಕೆಲಸದ ಮೇಲೆ ಅರ್ನ್ಸ್ಟ್ ಮತ್ತು ಯಂಗ್ ವಿರುದ್ಧ ಕಳೆದ ವರ್ಷ ನ್ಯೂಯಾರ್ಕ್‌ನಲ್ಲಿ ಮೊಕದ್ದಮೆ ಹೂಡಿದ್ದು, ಇದರಲ್ಲಿ ಅವರು 7 ಶತಕೋಟಿಯನ್ನು ಬಯಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!