ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬಂತು ಮತ್ತೆ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಮತ್ತೆ ಬೆದರಿಕೆ ಬಂದಿದ್ದು, ಮುಂಬೈನ ಸರ್​​ ಹೆಚ್​​ಎನ್​​ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ ಲೈನ್​ ನಂಬರ್​ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಡಿಬಿ ಮಾರ್ಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಇಂದು ಮಧ್ಯಾಹ್ನ ಬೆದರಿಕೆ ಕರೆ ಮಾಡಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಹಾಗೂ ಅಂಬಾನಿ ಕುಟುಂಬದ ಕೆಲವರ ಹೆಸರು ಹೇಳಿ ಬೆದರಿಕೆ ಹಾಕಲಾಗಿದೆ.

ಈ ಬಗ್ಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂಬೈ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!