ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಲಿಗಢದಲ್ಲಿ ಉದ್ಯಮಿ ಹತ್ಯೆಗೈದ ಪ್ರಕರಣದಲ್ಲಿ ಪ್ರಅಖಿಲ ಭಾರತ ಹಿಂದೂ ಮಹಾಸಭಾದ(ABHM) ಪದಾಧಿಕಾರಿ ಪೂಜಾ ಶಕುನ್ ಪಾಂಡೆ ಅವರನ್ನು ಶನಿವಾರ ರಾಜಸ್ಥಾನದ ಭರತ್‌ಪುರದಿಂದ ಬಂಧಿಸಲಾಗಿದೆ.
25 ವರ್ಷದ ದ್ವಿಚಕ್ರ ವಾಹನ ಶೋರೂಂ ಮಾಲೀಕ ಅಭಿಷೇಕ್ ಗುಪ್ತಾ ಅವರು ಹತ್ರಾಸ್‌ಗೆ ಬಸ್ ಹತ್ತುವಾಗ ಅಲಿಘಡದ ರೋರಾವರ್ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಈ ಹತ್ಯೆಗೆ ಪೂಜಾ ಶಕುನ್ ಪಾಂಡೆ ಮತ್ತು ಆಕೆಯ ಪತಿ, ABHM ವಕ್ತಾರ ಅಶೋಕ್ ಪಾಂಡೆ, ಮೊಹಮ್ಮದ್ ಫಜಲ್ ಮತ್ತು ಆಸಿಫ್ ಎಂಬ ಇಬ್ಬರು ಶೂಟರ್‌ಗಳಿಗೆ ಸುಫಾರಿ ನೀಡಿದ್ದರು ಎಂಬ ಆರೋಪವಿದೆ. ಈ ಸಂಬಂಧ ರೋರಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭರತ್‌ಪುರದಿಂದ ಪೂಜಾ ಅವರನ್ನು ಬಂಧಿಸಲಾಗಿದೆ ಎಂದು ಅಲಿಘಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ನೀರಜ್ ಕುಮಾರ್ ಜಾದೌನ್ ತಿಳಿಸಿದ್ದಾರೆ. ಅಶೋಕ್ ಪಾಂಡೆ ಮತ್ತು ಇಬ್ಬರು ಶೂಟರ್‌ಗಳು ಈಗಾಗಲೇ ಜೈಲಿನಲ್ಲಿದ್ದಾರೆ.