ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಕರೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ ದೇವ್ ಹಾಗೂ ಅಮಿತ್ ಚೌಧರಿ ಬಂಧಿತರು. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ನಿನ್ನ ಮಗನನ್ನು ಕಿಡ್ನ್ಯಾಪ್ ಮಾಡುತ್ತೇವೆ ಎಂದು ಬೆದರಿಸಿದ್ದರು. ಉದ್ಯಮಿಯ ಪುತ್ರ ನೀಡಿದ ದೂರಿನನ್ವಯ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.