ಉದ್ಯಮಿಗಳು ಸ್ಥಳೀಯ ಲಾರಿಗಳಿಗೆ ಅವಕಾಶ ಕಲ್ಪಿಸಬೇಕು: ಶಾಸಕಿ ರೂಪಾಲಿ ನಾಯ್ಕ

ಹೊಸದಿಗಂತ ವರದಿ, ಕಾರವಾರ:

ಸಾಲ ಮಾಡಿ ಲಾರಿ ಉದ್ಯಮ ಆರಂಭಿಸಿರುವ ಲಾರಿ ಮಾಲಿಕರು ಸಂಕಷ್ಟದಲ್ಲಿದ್ದು ಉದ್ಯಮಿಗಳು ಸ್ಥಳೀಯ ಲಾರಿಗಳಿಗೂ ಅವಕಾಶ ಕಲ್ಪಿಸಿ ಸಹಕಾರ ನೀಡಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಲಾರಿ ಮಾಲಿಕರ ಸಂಘ ಮತ್ತು ಉದ್ಯಮಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು
ಕಾರವಾರ ಅಂಕೋಲಾ ಭಾಗಗಳಲ್ಲಿ ಉದ್ಯಮಗಳು ಬೆಳೆಯಬೇಕು ಮತ್ತು ಇಲ್ಲಿನ ಉದ್ದಿಮೆಗಳಲ್ಲಿ ಸ್ಥಳೀಯ ಲಾರಿಗಳಿಗೂ ಅವಕಾಶ ಕಲ್ಪಿಸಬೇಕು ಎಂದರು.
ಬಿಣಗಾದಿಂದ ಬೈತಕೋಲ ವರೆಗೆ ಲಾರಿಗಳು ರಸ್ತೆಯಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತವೆ, ಚಾಲಕರು ಕನಿಷ್ಠ ಸೌಲಭ್ಯಗಳಿಲ್ಲದೇ ಸಮಸ್ಯೆಗಳನ್ನು ಅನುಭವಿಸುತ್ತಿರುತ್ತಾರೆ ಟ್ರಾನ್ಸ್ ಪೋರ್ಟ್ ಕಂಪನಿಗಳು ಲಾರಿ ಚಾಲಕರಿಗೆ ಮತ್ತು ಸಹಾಯಕರಿಗೆ ಕನಿಷ್ಠ ಸೌಕರ್ಯಗಳನ್ನು ಒದಗಿಸಲು ಗಮನ ನೀಡಬೇಕು ಎಂದು ಅವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ
ಡಾ.ನಿತಿನ್ ಪಿಕಳೆ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ ಲಾರಿ ಮಾಲಿಕರ ಸಂಘದ ಪದಾಧಿಕಾರಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!