Saturday, December 20, 2025

ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:


ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದು, ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ ಎಂದು ಹೇಳಿದರು.

ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡುತ್ತಾ, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

error: Content is protected !!