July 14, 2026
Tuesday, July 14, 2026
spot_img

ಆಗಸ್ಟ್‌ 15ರೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಹೆಸರು: ಸಚಿವ ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯದ ಎಲ್ಲಾ 5,927 ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಪಂಚಾಯಿತಿ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಗಡುವು ವಿಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಇಲಾಖೆಯ ಆಯುಕ್ತಾಲಯದಲ್ಲಿ ಇಂದು ಮಂಗಳವಾರ ನಡೆದ ಪಿಡಿಒ (PDO), ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಈ ಮಹತ್ವದ ಪ್ರಕಟಣೆ ಹೊರಡಿಸಿದರು.

ಬಜೆಟ್ ಘೋಷಣೆ ಜಾರಿ:

 ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ 2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 279ರಲ್ಲಿ ಘೋಷಿಸಿದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ನಿಗದಿತ ಸಮಯದೊಳಗೆ ರಾಜ್ಯದ ಎಲ್ಲಾ ಪಂಚಾಯಿತಿಗಳ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಗ್ರಾಮ ಸ್ವರಾಜ್ಯದ ಕನಸು:

ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಬಲಪಡಿಸಲು ಮತ್ತು ಗ್ರಾಮೀಣ ಆಡಳಿತಕ್ಕೆ ಹೊಸ ಮೆರುಗು ನೀಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದ ಗ್ರಾಮೀಣ ಭಾಗದ ಆಡಳಿತ ವ್ಯವಸ್ಥೆಯಲ್ಲಿ ಈ ನಾಮಕರಣ ಪ್ರಕ್ರಿಯೆಯು ಅತ್ಯಂತ ಪ್ರಮುಖ ಮೈಲಿಗಲ್ಲಾಗಲಿದ್ದು, ಆಗಸ್ಟ್ 15ರ ಧ್ವಜಾರೋಹಣದ ವೇಳೆಗೆ ಎಲ್ಲಾ ಪಂಚಾಯಿತಿಗಳು ನೂತನ ಹೆಸರಿನೊಂದಿಗೆ ಕಾರ್ಯನಿರ್ವಹಿಸಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !