Saturday, July 2, 2022

Latest Posts

ಉಪಚುನಾವಣೆ| ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಜನತೆ ಕುತೂಹಲದಿಂದ ಕಾಯುತ್ತಿದ್ದ ಮಸ್ಕಿ, ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಲ್ಲಿ ಇಂದು ಚುನಾವಣೆ ಆರಂಭವಾಗಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಮೇ.2 ರಂದು ಪ್ರಕಟವಾಗಲಿದೆ.

ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್ ನಿಂದ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ. ನಾರಾಯಣರಾವ್, ಜೆಡಿಎಸ್ ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಸ್ಪರ್ಧಿಸಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿ, ಕಾಂಗ್ರೆಸ್ ನಿಂದ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ.

ಮಸ್ಕಿ ವಿಧಾನಸಭೆ ಉಪಚುನಾವಣೆ ಕಣದಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ , ಕಾಂಗ್ರೆಸ್ ನಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss