Saturday, August 13, 2022

Latest Posts

ಉಪ ಚುನಾವಣೆ: ಬಸವಕಲ್ಯಾಣಗೆ ಭೇಟಿ ನೀಡಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು 

ದಿಗಂತ ವರದಿ ಬೀದರ :

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಮಾರ್ಚ ಬಸವಕಲ್ಯಾಣ ನಗರಕ್ಕೆ ಭೇಟಿ ನೀಡಿ, ಉಪ ಚುನಾವಣೆಗೆ ಸಂಬAಧಿಸಿದ ಸಿದ್ಧತೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಬಸವಕಲ್ಯಾಣ ತಹಸೀಲ್ ಕಚೇರಿಯಲ್ಲಿ ಪ್ರಥಮ ಬಾರಿಗೆ ಬೀದರ ಸಹಾಯಕ ಆಯುಕ್ತರು ಹಾಗೂ ಬಸವಕಲ್ಯಾಣ, ಭಾಲ್ಕಿ ಮತ್ತು ಹುಲಸೂರ ತಹಸೀಲ್ದಾರಗಳು ಮತ್ತು ತಹಸೀಲ್ ಕಚೇರಿಯ ಸಿಬ್ಬಂದಿ, ಪೊಲೀಸ್ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯೊAದಿಗೆ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ರಜೆ ಮೇಲೆ ತೆರಳದೇ ಕಡ್ಡಾಯ ಕೇಂದ್ರ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರಿಯಾಗಿ ಕೆಲಸ ನಿರ್ವಹಿಸದಿದ್ದಲ್ಲಿ ಮೌಖಿಕವಾಗಿ ಹೇಳದೇ ಲಿಖಿತವಾಗಿ ತಿಳಿಸಲಾಗುವುದು. ಆದಾಗ್ಯೂ ಕೆಲಸ ನಿರ್ವಹಿಸದಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ವಿವಿಧ ತಂಡಗಳೊAದಿಗೆ ಸಭೆ: ಬಳಿಕ ಜಿಲ್ಲಾಧಿಕಾರಿಗಳು, ಬಸವಕಲ್ಯಾಣ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಟಿ, ವಿಎಸ್‌ಟಿ, ವಿವಿಟಿ ಸೇರಿದಂತೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿವಿಧ ತಂಡಗಳೊAದಿಗೆ ಸಭೆ ನಡೆಸಿ ಹಲವಾರು ವಿಷಯಗಳನ್ನು ಚರ್ಚಿಸಿದರು. ಆಯಾ ತಂಡಗಳ ಕಾರ್ಯವೈಖರಿಯ ಬಗ್ಗೆ ತಂಡದವರಿಗೆ ಮನವರಿಕೆ ಮಾಡಿದ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗದ ನಿರ್ದೇಶನುಸಾರ ಆಯಾ ತಂಡಗಳಿಗೆ ವಹಿಸಿದ ಜವಾಬ್ದಾರಿಯನ್ನರಿತು ಎಲ್ಲರೂ ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದರು.
ಏನಾದರು ತೊಂದರೆ ಇದ್ದಲ್ಲಿ ಕೂಡಲೇ ಆರ್‌ಓ ಮತ್ತು ತಹಸೀಲ್ದಾರ ಅವರಿಗೆ ತಿಳಿಸಿ, ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಯುಕ್ತರಾದ ಭುವನೇಶ ಪಾಟೀಲ, ತಹಸೀಲ್ದಾರ ಸಾವಿತ್ರಿ ಸಲಗರ ಹಾಗೂ ಇನ್ನೀತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss