June 30, 2026
Tuesday, June 30, 2026
spot_img

ರಾಜ್ಯದ 2 ಕ್ಷೇತ್ರಗಳಿಗೆ ಬೈ-ಎಲೆಕ್ಷನ್ ಫಿಕ್ಸ್: ಏಪ್ರಿಲ್‌ನಲ್ಲಿ ವೋಟಿಂಗ್, ಮೇ ತಿಂಗಳಲ್ಲಿ ಫಲಿತಾಂಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಚುನಾವಣಾ ಆಯೋಗವು ಇಂದು ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೂ ದಿನಾಂಕ ಘೋಷಣೆಯಾಗಿದೆ.

ಚುನಾವಣಾ ವೇಳಾಪಟ್ಟಿ:

ಮತದಾನದ ದಿನಾಂಕ: ಏಪ್ರಿಲ್ 9

ಫಲಿತಾಂಶದ ದಿನಾಂಕ: ಮೇ 4

ದಾವಣಗೆರೆ ದಕ್ಷಿಣ ಕ್ಷೇತ್ರದ ಹಿರಿಯ ನಾಯಕ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ ಅವರ ನಿಧನದಿಂದಾಗಿ ಈ ಎರಡೂ ಕ್ಷೇತ್ರಗಳು ತೆರವಾಗಿದ್ದವು. ಈಗ ಈ ಸ್ಥಾನಗಳನ್ನು ತುಂಬಲು ಚುನಾವಣಾ ಆಯೋಗವು ಸಜ್ಜಾಗಿದೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ತಮಿಳುನಾಡು, ಕೇರಳ, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ಸಾರ್ವತ್ರಿಕ ಚುನಾವಣೆ ಹಾಗೂ ಮಹಾರಾಷ್ಟ್ರ, ಗುಜರಾತ್ ಮುಂತಾದ ರಾಜ್ಯಗಳ ಉಪಚುನಾವಣಾ ದಿನಾಂಕಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !