ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮೂರು ಪ್ರಮುಖ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಹೀಗಾಗಿ ಉಭಯ ಪಕ್ಷಗಳ ನಾಯಕರೆಲ್ಲರೂ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಇದೀಗ ಅಲ್ಲಿಂದ ತೆರಳಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಮೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಕಳೆದ ಹಲವು ದಿನಗಳಿಂದ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಭರ್ಜರಿ ಪ್ರಚಾರ ಮಾಡಿದರು.
ನವೆಂಬರ್ 13 ರಂದು ಮತದಾನ ನಡೆಯುವ ಹಿನ್ನೆಲೆ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಇಂದು ಸಂಜೆ 6 ಗಂಟೆಯಿಂದ ನವೆಂಬರ್ 14 ರ ಬೆಳಗ್ಗೆ 6 ಗಂಟೆವರೆಗೂ ಮದ್ಯಮಾರಾಟ ಮಾಡುವಂತಿಲ್ಲ. ಹಾಗಾಗಿ ಮದ್ಯಪ್ರಿಯರು ಎದ್ನೋ ಬಿದ್ನೋ ಎಂಬಂತೆ ಬಾರ್ ಅಂಗಡಿಗಳ ಮೇಲೆ ಮುಗಿಬಿದ್ದು, ಮದ್ಯ ಖರೀದಿಸಿ ಸ್ಟಾಕ್ ಮಾಡಿಕೊಂಡಿದ್ದಾರೆ.