Monday, August 15, 2022

Latest Posts

ಉಪಚುನಾವಣೆ ಫಲಿತಾಂಶ: ಮಸ್ಕಿಯಲ್ಲಿ ಬಸನಗೌಡಗೆ ಮುನ್ನಡೆ

 ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ಇಂದು 8 ಗಂಟೆಯಿಂದ ಆರಂಭವಾಗಿದ್ದು, ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ವಿರುದ್ಧ ಆರಂಭಿಕ ಮುನ್ನಡೆ ಸಾಧಿಸಿದ್ದು, 287 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆಂದು ತಿಳಿದುಬಂದಿದೆ.

ಅದೇ ರೀತಿಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಬಸವ ಕಲ್ಯಾಣದಲ್ಲಿ , ಬಿಜೆಪಿ ಅಭ್ಯರ್ಥಿ ಶರಣು ಸಲಗರ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss