May 2, 2026
Saturday, May 2, 2026
spot_img

ಉಪಚುನಾವಣೆ ಮುಕ್ತಾಯ, ಮಂತ್ರಿಗಿರಿ ಪರ್ವ ಆರಂಭ: ದೆಹಲಿ ಫ್ಲೈಟ್ ಏರಲಿದ್ದಾರೆ ಸಿದ್ದರಾಮಯ್ಯ ಆಪ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಉಪಚುನಾವಣೆಯ ಅಬ್ಬರ ತಣ್ಣಗಾಗುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು ಜೋರಾಗಿದೆ. ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸುಮಾರು 40 ಹಿರಿಯ ಶಾಸಕರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದ್ದಾರೆ.

ಸಂಪುಟ ಪುನಾರಚನೆಯ ಗಾಳಿ ಜೋರಾಗಿ ಬೀಸುತ್ತಿದ್ದು, ಹಿರಿಯ ಶಾಸಕರು ಎರಡು-ಮೂರು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಡಲಿದ್ದಾರೆ. ಈ ಪ್ರವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದ್ದು, ಇದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ದೆಹಲಿಯಲ್ಲಿ ಬೀಡುಬಿಡಲಿರುವ ಈ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸಲಿದ್ದಾರೆ. ಸಮಯ ಸಿಕ್ಕರೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಂತ್ರಿ ಪದವಿ ಪಡೆಯಲು ಲಾಬಿ ನಡೆಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ, ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ‘ಪವರ್ ಗೇಮ್’ ಆರಂಭವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !