5 ಕ್ಷೇತ್ರಗಳ ಉಪ ಚುನಾವಣೆ: ಕೇರಳದಲ್ಲಿ UDF,ಬಂಗಾಳದಲ್ಲಿ TMC, ಗುಜರಾತ್‌ನಲ್ಲಿ AAP, BJPಗೆ ತಲಾ ಒಂದು ಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಕೇರಳದ ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಗಳು ಮಿಶ್ರ ಫಲಿತಾಂಶಗಳು ಲಭ್ಯವಾಗಿದ್ದು, ಗುಜರಾತ್‌ನಲ್ಲಿ ಎಎಪಿ ಮತ್ತು ಬಿಜೆಪಿ ತಲಾ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ ಮತ್ತು ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ.

ಪಶ್ಚಿಮ ಬಂಗಾಳ: ಕಾಳಿಗಂಜ್‌ನಲ್ಲಿ ಟಿಎಂಸಿಗೆ ಭರ್ಜರಿ ಗೆಲುವು
ಕಾಳಿಗಂಜ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಅಭ್ಯರ್ಥಿ ಅಲಿಫಾ ಅಹಮದ್ ತಮ್ಮ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಆಶಿಶ್ ಘೋಷ್ ಅವರಿಗಿಂತ 50,049 ಮತಗಳ ಭರ್ಜರಿ ಅಂತರದಿಂದ ಗೆದ್ದಿದ್ದಾರೆ. ಈ ವರ್ಷ ಫೆಬ್ರುವರಿಯಲ್ಲಿ ಅವರ ತಂದೆ ನಾಸಿರುದ್ದೀನ್ ಅಹ್ಮದ್ ನಿಧನರಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಈ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.

ಪಂಜಾಬ್‌ನ ಲುಧಿಯಾನ ಪಶ್ಚಿಮದಲ್ಲಿ, 14 ಸುತ್ತುಗಳ ಪೈಕಿ ಆರು ಸುತ್ತುಗಳ ಎಣಿಕೆ ಪೂರ್ಣಗೊಂಡ ನಂತರ ಎಎಪಿಯ ಸಂಜೀವ್ ಅರೋರಾ ಕಾಂಗ್ರೆಸ್‌ನ ಭರತ್ ಭೂಷಣ್ ಅಶುಗಿಂತ 2,286 ಮತಗಳಿಂದ ಮುಂದಿದ್ದಾರೆ. ಬಿಜೆಪಿಯ ಜೀವನ್ ಗುಪ್ತಾ ಮೂರನೇ ಸ್ಥಾನದಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಪರುಪ್ಕರ್ ಸಿಂಗ್ ಘುಮಾನ್ ನಂತರದ ಸ್ಥಾನದಲ್ಲಿದ್ದಾರೆ. ಈ ವರ್ಷದ ಆರಂಭದಲ್ಲಿ ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆದಿತ್ತು.

ಗುಜರಾತ್: ವಿಶಾವದರ್ ಕ್ಷೇತ್ರದಲ್ಲಿ ಎಎಪಿಗೆ ಜಯ, ಕಡಿ ಕ್ಷೇತ್ರದಲ್ಲಿ ಬಿಜೆಪಿ
ಗುಜರಾತ್‌ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆಯಲ್ಲಿಎಎಪಿ ನಾಯಕ ಗೋಪಾಲ್ ಇಟಾಲಿಯಾ ವಿಶಾವದರ್ ಸ್ಥಾನವನ್ನು ಗೆದ್ದರೆ, ಬಿಜೆಪಿಯ ರಾಜೇಂದ್ರ ಚಾವ್ಡಾ ಕಾಡಿ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಇಟಾಲಿಯಾ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ ಅವರನ್ನು 17,554 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಚುನಾವಣಾ ಆಯೋಗ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಒಟ್ಟು 21 ಸುತ್ತಿನ ಮತ ಎಣಿಕೆಯ ಅಂತ್ಯದ ನಂತರ ಇಟಾಲಿಯಾ 75,942 ಮತಗಳನ್ನು ಪಡೆದರೆ, ಪಟೇಲ್ 58,388 ಮತಗಳನ್ನು ಪಡೆದಿದ್ದಾರೆ.

ಫೆಬ್ರುವರಿಯಲ್ಲಿ ಬಿಜೆಪಿ ಶಾಸಕ ಕರ್ಸನ್ ಸೋಲಂಕಿ ಅವರ ನಿಧನದ ನಂತರ ಈ ಸ್ಥಾನ ತೆರವಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!