ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮೂರು ಜಿಲ್ಲೆಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ತಂಡವನ್ನು ರಚಿಸಿದೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್.ಅಶ್ವತ್‌ನಾರಾಯಣ, ಸಂಡೂರಿಗೆ ಸಿ ಟಿ ರವಿ, ಶಿಗ್ಗಾವಿಗೆ ಆರ್ ಅಶೋಕ್ ನೇತೃತ್ವದ ತಂಡವನ್ನು ರಚನೆ ಮಾಡಲಾಗಿದೆ.
ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವಂತೆ ಸೂಚನೆ ನೀಡಲಾಯಿತು. ವರದಿಗಳನ್ನು ಪೂರ್ಣಗೊಳಿಸಿದ ನಂತರ ಹೈಕಮಾಂಡ್‌ಗೆ ರವಾನಿಸಲು ಬಿಜೆಪಿ ನಿರ್ಧರಿಸಿದೆ.