ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿಗೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯಲಿದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್ ಕಣದಲ್ಲಿ ಇದ್ದಾರೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಮತ್ತು ಯಾಸೀರ್ ಪಠಾಣ್ ಕಣದಲ್ಲಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನಮಂತ ಮಧ್ಯೆ ಸ್ಪರ್ಧೆಯಿದೆ. ಮೂರು ಕ್ಷೇತ್ರಗಳ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ. ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.