ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಷ್ಕರ್ಮಿಗಳಿಂದ ಬರ್ಬರ ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ 25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಬಿಜೆಪಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಅನ್ನೋದು ಮತ್ತೊಮ್ಮೆ ಸಾಬಿತಾಗಿದೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ, ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.