Thursday, July 7, 2022

Latest Posts

ಬ್ಯಾಡಗೊಟ್ಟ ಗ್ರಾಮಸ್ಥರ ವಿರೋಧದ ನಡುವೆಯೂ ಪೊಲೀಸ್ ಬಂದೋಬಸ್ತ್ ನಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೇಲಿ ನಿರ್ಮಾಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕುಶಾಲನಗರ:

ಕಸ ವಿಲೇವಾರಿ ಘಟಕ ಸ್ಥಾಪನೆಗೆ ಗ್ರಾಮಸ್ಥರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಪೊಲೀಸ್ ಬಂದೋಬಸ್ತ್ ನಡುವೆ ಘಟಕಕ್ಕೆ ತಂತಿ ಬೇಲಿ ನಿರ್ಮಿಸುವ ಕಾರ್ಯ ಇಲ್ಲಿಗೆ ಬ್ಯಾಡಗೊಟ್ಟ ಗ್ರಾಮದಲ್ಲಿ ನಡೆಯಿತು.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ನಿರ್ಮಿಸುವ ಪ್ರಸ್ತಾವನೆ 2017-18 ಸಾಲಿನಿಂದ ಇದ್ದು ಇದುವರೆಗೂ ಗ್ರಾಮಸ್ಥರ ವಿರೋಧವೂ ಸೇರಿದಂತೆ ವಿವಿಧ ಕಾರಣಗಳಿಂದ ಈ ಕಾರ್ಯ ಸ್ಥಗಿತಗೊಂಡಿತ್ತು.
ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಿ ಶುಚಿತ್ವದ ಕಡೆಗೆ ಹೆಚ್ಚು ಗಮನಹರಿಸುವಂತೆ ಸರಕಾರ ಹಾಗೂ ಜಿಲ್ಲಾಡಳಿತ ಸೂಚನೆ ನೀಡಿತ್ತು. ಅದರಂತೆ ಕಂದಾಯ ಇಲಾಖೆಯ ವತಿಯಿಂದ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಸರ್ವೆ ನಂಬರ್ 11 ರಲ್ಲಿ ಒಂದು ಎಕರೆ ಜಾಗವನ್ನು ಗುರುತಿಸಲಾಗಿತ್ತು. ಅಲ್ಲದೆ ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯಲ್ಲೂ ಬ್ಯಾಡಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಿoದ ಬಹು ದೂರದ ಜಾಗದಲ್ಲಿ ಒಣ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿತ್ತು.
ಆದರೆ ಕಸ ವಿಲೇವಾರಿ ಘಟಕ ಪ್ರಾರಂಭಿಸುವುದಕ್ಕೆ ಬ್ಯಾಡಗೊಟ್ಟ ಗ್ರಾಮಸ್ಥರು ಮತ್ತು ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಹಿಂದೆ ಪಂಚಾಯತ್ ಬೇಲಿ ನಿರ್ಮಿಸಲು ಮುಂದಾದಾಗ ಅದಕ್ಕೆ ಅಡ್ಡಿಪಡಿಸಿದ್ದರು.
ಆದರೆ ಜಿಲ್ಲಾಧಿಕಾರಿಗಳ ಅದೇಶ ಮತ್ತು ಗ್ರಾಮ ಪಂಚಾಯತ್ ತೀರ್ಮಾನದಂತೆ ಗುರುವಾರ ಕಸ ವಿಲೇವಾರಿ ಘಟಕದ ಜಾಗಕ್ಕೆ ಬೇಲಿ ನಿರ್ಮಿಸಲು ಗ್ರಾಮ ಪಂಚಾಯತ್ ಅಡಳಿತ ಮಂಡಳಿ ಮುಂದಾಗಿತ್ತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಯಿಷಾ ಮತ್ತು ಸದಸ್ಯ ಟಿ.ಪಿ.ಹಮೀದ್ ಅವರೊಂದಿಗೆ ಮಾತಿನ ಚಕಮಕಿಗೆ ಇಳಿದರು. ಅಲ್ಲದೆ ಬೇಲಿ ನಿರ್ಮಾಣ ಕಾರ್ಯಕ್ಕೆ ತಡೆಯೊಡ್ಡಲು ಮುಂದಾದರು.
ಈ ಸಂದರ್ಭ ಮಧ್ಯಪ್ರವೇಶಿಸಿದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಅವರು, ಜಿಲ್ಲಾಧಿಕಾರಿ ಆದೇಶದಂತೆ ಗ್ರಾಮ ಪಂಚಾಯತಿಯವರು ಒಣ ಕಸ ವಿಲೇವಾರಿ ಘಟಕದ ಜಾಗಕ್ಕೆ ಬೇಲಿ ಹಾಕಲು ಮುಂದಾಗಿದ್ದಾರೆ. ಇದಕ್ಕೆ ಯಾರೂ ತಡೆಯೊಡ್ಡಬಾರದು ಎಂದು ಜಾಗದಲ್ಲಿದ್ದ ಗ್ರಾಮಸ್ಧರನ್ನು ಹೊರಗೆ ಕಳುಹಿಸಿದರು.
ವಿಷಯಕ್ಕೆ ಸಂಬoಧಿಸಿದoತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಯಿಷಾ ನವರ ಪ್ರತಿಕ್ರಿಯೆ ಬಯಸಿದಾಗ, ಕಳೆದ ಮೂರು ವರ್ಷಗಳ ಹಿಂದೆಯೇ ಕಸ ವಿಲೇವಾರಿ ಘಟಕದ ಜಾಗವನ್ನು ಗುರುತಿಸಲಾಗಿತ್ತು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕವನ್ನು ತೆರೆಯುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಆದೇಶದಂತೆ ಒಣ ಕಸ ವಿಲೇವಾರಿ ಮಾಡಲು ಅಡಳಿತ ಮಂಡಳಿ ತೀರ್ಮಾನಿಸಿದ್ದು, ಅದರಂತೆ ಕಾರ್ಯೋನ್ಮುಖರಾಗಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಹಾಯಕ ಠಾಣಾಧಿಕಾರಿ ಸ್ವಾಮಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ಗ್ರಾ.ಪಂ. ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೇಗೌಡ ಹಿರಿಯ ಸದಸ್ಯರಾದ ಟಿ ಪಿ ಹಮೀದ್, ಎಸ್.ಎನ್.ಅನಂತ, ಕೆ.ಎಸ್.ಶಿವಕುಮಾರ್, ರತ್ನಮ್ಮ, ಹೆಚ್.ಎಸ್.ರವಿ, ಜಯಶ್ರೀ, ಜಯಶೀಲ, ಪಲ್ಲವಿ ಲಕ್ಷಿö್ಮ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss