ಆರು ರಾಜ್ಯದ ಏಳು ಕ್ಷೇತ್ರಗಳ ಉಪ ಚುನಾವಣೆ: ಬಿಜೆಪಿಗೆ ಅಧಿಕ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ವಿವಿಧ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿದ್ದ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತಎಣಿಕೆಯಲ್ಲಿ ಬಿಜೆಪಿ ಹರಿಯಾಣ,ಒರಿಸ್ಸಾ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೆ, ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ವು ಮೊಕಾಮಾ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದೆ.
ಮುಂಬೈನ ಅಂಧೇರಿ(ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಶಿವಸೇನೆಯ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಅಭ್ಯರ್ಥಿ ರುತುಜಾ ಲಟ್ಕೆ ಗೆಲುವು ಸಾಧಿಸಿದರೆ, ತೆಲಂಗಾಣದ ಮುನುಗೋಡುದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯು ಜಯ ಗಳಿಸಿದೆ.

ಉತ್ತರ ಪ್ರದೇಶದ ಗೋಲ ಗೋಕರನಾಥ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮನ್ ಗಿರಿ ಅವರು ಸಮೀಪದ ಪ್ರತಿಸ್ಪರ್ಧಿ ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು 34,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಹರಿಯಾಣದ ಅದಂಪುರದಲ್ಲೂ ಬಿಜೆಪಿ ಅಭ್ಯರ್ಥಿ ಭವ್ಯಾ ಬಿಷ್ಣೋಯ್ ಅವರು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೈ ಪ್ರಕಾಶ್ ಅವರನ್ನು ಸುಮಾರು 16,000 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!