Wednesday, November 30, 2022

Latest Posts

ಬೈಂದೂರು ಶಾಸಕರ ಭಾವಚಿತ್ರ ವಿರೂಪ: ಅರೋಪಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರ ಭಾವಚಿತ್ರ ವಿರೂಪಗೊಳಿಸಿ ಅವಮಾನಗೊಳಿಸುವಂತೆ ತನ್ನ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ ಆರೋಪದಲ್ಲಿ ಸತೀಶ ಶೆಟ್ಟಿ ಹಡಾಳಿ ಎಂಬವರನ್ನು ಬುಧವಾರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರ ಭಾವಚಿತ್ರ ವಿರೂಪಗೊಳಿಸಿ ಅವಮಾನ ಎಸಗಿದ್ದು, ಶಾಸಕರು ಸಾರ್ವಜನಿಕ ಕರ್ತವ್ಯ ನಿರ್ವಹಣೆಯಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿ ರಾಜಕೀಯ ಪಕ್ಷಗಳ ಕಾರ್ಯಕರ್ತರಲ್ಲಿ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ಬಿತ್ತರಿಸಿದ್ದಾರೆ ಎಂದು ಉಮೇಶ್ ಶೆಟ್ಟಿ ಕಲ್ಗದೆ ಎಂಬವರು ಶಂಕರನಾರಾಯಣ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!